Thursday, January 23, 2025
ಸುದ್ದಿ

ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ತಡೆ ; ಆದೇಶ ಹಿಂಪಡೆತ-ಕಹಳೆ ನ್ಯೂಸ್

ಮಂಗಳೂರು : ಚಿಕ್ಕಮಗಳೂರು ಜಿಲ್ಲಾಧಿಕಾರಿ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದ ಬುಧವಾರ ಹೊರಡಿಸಿದ್ದ ಆದೇಶವನ್ನು ಗುರುವಾರ ಹಿಂಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಭಾರೀ ಭೂಕುಸಿತವಾಗಿತ್ತು. ಪರಿಣಾಮ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕ್ಕಮಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯತ್ತ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಚಾರ್ಮಾಡಿ ಘಾಟ್‍ನ ಹೆದ್ದಾರಿಯಲ್ಲಿ ಕೈಗೊಳ್ಳಲಾಗಿದ್ದ ರಸ್ತೆ ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿದ್ದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬುಧವಾರ ಈ ರಸ್ತೆಯಲ್ಲಿ 6 ಚಕ್ರಕ್ಕೂ ಹೆಚ್ಚು ಚಕ್ರಗಳ ವಾಹನಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಹೆದ್ದಾರಿಯನ್ನು ಮುಕ್ತಗೊಳಿಸಿ ಆದೇಶ ಹೊರಡಿಸಿದ್ದರು. ಆದರೆ ದ.ಕ ಜಿಲ್ಲೆಯ ವ್ಯಾಪ್ತಿಯ ಕಾಮಗಾರಿ ಅಪೂರ್ಣವಾಗಿರುವುದರಿಂದ, ಸಂಚಾರಕ್ಕೆ ತಾತ್ಕಲಿಕ ತಡೆಯೊಡ್ಡುವ ಮತ್ತು ಆದೇಶ ಹಿಂಪಡೆಯುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಮನವಿ ಮಾಡಿದ್ದು ಈ ಮೇರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಅವರು ಗುರುವಾರ ಚಾರ್ಮಾಡಿ ಘಾಟ್ ರಸ್ತೆಯನ್ನು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವ ಆದೇಶವನ್ನು ಹಿಂಪಡೆದಿದ್ದಾರೆಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು