Friday, January 24, 2025
ಹೆಚ್ಚಿನ ಸುದ್ದಿ

ಇಬ್ಬರು ಮಹಿಳಾ ಸಿಬ್ಬಂದಿಗಳಿಂದ ಪ್ರಾಥಮಿಕ ಆಸ್ಪತ್ರೆಯಲ್ಲೇ ಸಿಗರೇಟ್, ಗುಂಡು ಪಾರ್ಟಿ-ಕಹಳೆ ನ್ಯೂಸ್

ಬೆಳಗಾವಿ : ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗಳು ಪ್ರಾಥಮಿಕ ಆರೋಗ್ಯ ಆಸ್ಪತ್ರೆಯಲ್ಲೇ ಸಿಗರೇಟ್, ಗುಂಡು ಪಾರ್ಟಿ ನಡೆಸಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ ಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ಮೇಲೆ ಸ್ಪಾಫ್ ನರ್ಸ್ ಪ್ರಾಥಮಿಕ ಆಸ್ಪತ್ರೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದು, ಆಸ್ಪತ್ರೆಯಲ್ಲೇ ಸಿಗರೇಟ್ ಸೇದಿ, ಮದ್ಯಪಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಪ್ರಾಥಮಿಕ ಕೇಂದ್ರವು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ. ಸ್ಟಾಫ್ ನರ್ಸ್‍ಗಳು ಮದ್ಯದ ನಶೆಯಲ್ಲಿಯೇ ಚಿಕಿತ್ಸೆ ನೀಡುತ್ತಾರೆ ಎನ್ನುವ ಆರೋಪವೂ ಇದೆ. ಜನರಿಗೆ ಚಿಕಿತ್ಸೆ ನೀಡಬೇಕಾದ ಸ್ಥಳದಲ್ಲೇ ಮದ್ಯಪಾನ, ಧೂಮಪಾನದಂತಹ ಅಕ್ರಮ ಚಟುವಟಿಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಸಿಬ್ಬಂದಿಗಳ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು