Thursday, January 23, 2025
ಸುದ್ದಿ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ -ಕಹಳೆ ನ್ಯೂಸ್

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷೆಗೊಳಗಾದ ಆರೋಪಿಯನ್ನು ಕೆಮ್ರಾಲ್ ಮುಲ್ಯೊಟ್ಟು ನಿವಾಸಿ 41ವರ್ಷದ ದಿನೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2018ರ ಡಿಸೆಂಬರ್ 23ರ ರಾತ್ರಿ ಮತ್ತು 2019ರ ಜನವರಿ 6ರಂದು ಮಧ್ಯಾಹ್ನ ಅತ್ಯಾಚಾರವೆಸಗಿದ್ದ ಎನ್ನಲಾಗಿದ್ದು, ಇದಾದ ಎರಡು ತಿಂಗಳ ನಂತರ ಯುವತಿಗೆ ಅನಾರೋಗ್ಯವಾಗಿದ್ದು, ಪೋಷಕರ ಜತೆ ವೈದ್ಯರ ಬಳಿ ತೆರಳಿ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಪೋಷಕರು ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ದಿನೇಶ್ ಶೆಟ್ಟಿ ಅತ್ಯಾಚಾರಗೈದಿರುವ ವಿಷಯ ತಿಳಿಸಿದ್ದಾಳೆ. ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗುಗಿದ್ದು, ಬಳಿಕ ಮಗುವಿನ ಡಿಎನ್‍ಎ ಪರೀಕ್ಷೆಯಲ್ಲೂ ಆರೋಪ ದೃಢಪಟ್ಟಿದೆ ಎನ್ನಲಾಗಿದೆ. ಇನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ನ್ಯಾಯಾಲಯ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಪ್ರಕರಣವನ್ನು ಸಮಗ್ರ ವಿಚಾರಣೆ ನಡೆಸಿದ ಬಳಿಕ ಆರೋಪ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಐಪಿಸಿ 376 ಪ್ರಕರಣದಡಿ 7 ವರ್ಷ ಕಠಿಣ ಸಜೆ, 5ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1 ತಿಂಗಳ ಕಠಿಣ ಸಜೆ, ಪೋಕ್ಸೋ ಪ್ರಕರಣದಡಿ 10 ವರ್ಷ ಕಠಿಣ ಸಜೆ ಹಾಗೂ 50ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಕಠಿಣ ಸಜೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿ ಕೂಲಿ ಕೆಲಸ ಮಾಡುತ್ತಿದ್ದು, ಆತನಿಗೆ ಈಗಾಗಲೇ ಮದುವೆಯಾಗಿ, ಇಬ್ಬರು ಮಕ್ಕಳು ಕೂಡ ಇದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು