Friday, January 24, 2025
ಸುದ್ದಿ

ದೇಶ ಕೊರೊನಾ ಮುಕ್ತವಾಗಲು ಕೈಜೋಡಿಸೋಣ; ಲಸಿಕೆ ಪಡೆದ ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ನಗರದ ಎ.ಜೆ ಆಸ್ಪತ್ರೆಯಲ್ಲಿ ಮಾರ್ಚ್ 19 ರ ಶುಕ್ರವಾರ ನಳಿನ್ ಅವರಿಗೆ ಕೊರೊನಾ ಲಸಿಕೆಯ ಚುಚ್ಚುಮದ್ದು ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಲಸಿಕೆ ಪಡೆದು ಮಾತನಾಡಿದ ಸಂಸದರು, ಕೊರೊನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಲಸಿಕೆ ಸ್ವೀಕರಿಸಬೇಕು, ಎಂದು ಮನವಿ ಮಾಡಿದರು. ರಾಜ್ಯದ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆದು, ದೇಶವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಹೇಳಿದರು. ರಾಜ್ಯದಲ್ಲಿ ಕೊರೊನಾ ಲಸಿಕಾ ಅಭಿಯಾನ ವೇಗ ಪಡೆದುಕೊಂಡಿದ್ದು, ಈಗಾಗಲೇ ಹಲವು ಗಣ್ಯರು ಕೊರೊನಾ ಲಸಿಕೆ ಸ್ವೀಕರಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು