Sunday, November 24, 2024
ರಾಜಕೀಯ

ತಮಿಳುನಾಡು ಕಾವೇರಿ ಪ್ರತಿಭಟನೆಯನ್ನು ಬೆಂಬಲಿಸಿದ ರಮ್ಯಾ ; ಕನ್ನಡ ದ್ರೋಹಿ – ಕಹಳೆ ನ್ಯೂಸ್

ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತಾಗಿ ಪ್ರಕಟವಾದ ಸುದ್ದಿಯನ್ನು ರಮ್ಯಾ ಟ್ವೀಟ್ ಮಾಡಿದ್ದನ್ನು ಕನ್ನಡಿಗರು ಖಂಡಿಸಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆಗ್ರಹಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆನ್‍ಲೈನ್ ತಾಣವೊಂದು ಈ ಸುದ್ದಿಯನ್ನು ಪ್ರಕಟಿಸಿದ್ದು, ರಮ್ಯಾ ಅವರು ಈ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಾಕಿ “Loud and clear ಎಂದು ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಟ್ವೀಟ್ ಅನ್ನು ಕನ್ನಡಿಗರು ಖಂಡಿಸಿದ್ದು, ಕನ್ನಡ ದ್ರೋಹಿ ರಮ್ಯಾ ಅವರಿಗೆ ಧಿಕ್ಕಾರ ಎಂದು ಬರೆದು ಟೀಕಿಸಿದ್ದಾರೆ. ನಿಮ್ಮ ಟ್ವೀಟ್ ನಿಂದಾಗಿ ಕಾಂಗ್ರೆಸ್‍ಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂಬ ಆಗ್ರಹ ಇರುವುದು ಗೊತ್ತಾಯಿತು ಎಂದು ಬರೆದು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಹೇಳಿದ್ದು ಏನು?
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ನ್ಯಾಯಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಲ್ಲದೇ ಸ್ಕೀಂ ರಚನೆ ವಿಚಾರವಾಗಿ ಕೇಂದ್ರ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಏಪ್ರಿಲ್ 9 ರಂದು ನಡೆದ ಅರ್ಜಿ ವಿಚಾರಣೆ ವೇಳೆ ಸ್ಪಷ್ಟಪಡಿಸಿದೆ.

ಕಾವೇರಿ ನೀರಿನ ಹಂಚಿಕೆ ಕುರಿತು ವಿಚಾರದಲ್ಲಿ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿಲ್ಲ. ಈಗಾಗಲೇ ಈ ಕುರಿತು ಕ್ರಮಕೈಗೊಳ್ಳಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಮೇ 3 ರ ಒಳಗೆ ಸ್ಕೀಂ ರಚನೆ ಕುರಿತು ಕೇಂದ್ರ ಸರ್ಕಾರ ಕರಡು ಪ್ರತಿಯನ್ನು ಸುಪ್ರಿಂಕೊರ್ಟ್ ಗೆ ಸಲ್ಲಿಸಬೇಕು. ಸುಪ್ರೀಂ ಕೋರ್ಟ್ ಕರಡು ಪ್ರತಿ ಪರಿಶೀಲನೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದೆ.

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಧಿಕರಣ ತೀರ್ಪು ವಿಲೀನಗೊಳಿಸಿ ಆದೇಶ ನೀಡಿದ್ದು, ಪದೇ ಪದೇ ನ್ಯಾಯಧಿಕರಣ ಆದೇಶ ಉಲ್ಲೇಖಿಸುವಂತಿಲ್ಲ ಎಂದು ಸೂಚನೆ ನೀಡಿದೆ. ನೀರು ಹಂಚಿಕೆ ಮಾಡಿ ನಾವು ಆದೇಶ ನೀಡಿದ್ದೇವೆ. ಹಂಚಿಕೆ ಕಾರ್ಯರೂಪಕ್ಕೆ ಬರಲು ಕೇಂದ್ರ ಸರ್ಕಾರ ಸ್ಕೀಂ ರಚನೆ ಮಾಡಲಿದೆ. ಕೇಂದ್ರ ರಚಿಸುವ ಸ್ಕೀಂಗೆ ಎಲ್ಲ ರಾಜ್ಯಗಳು ಬದ್ಧವಾಗಿರಬೇಕು ಎಂದು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಿದೆ.

ಅರ್ಜಿ ವಿಚಾರಣೆ ವೇಳೆ ಕಾವೇರಿ ನಿರ್ವಹಣಾ ಮಂಡಳಿ ವಿಚಾರವನ್ನು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಲಿಲ್ಲ. ತೀರ್ಪು ಪಾಲನೆಗೆ ಯೋಜನೆ ಅವಶ್ಯಕತೆ ಇದ್ದು ಆ ನಿಟ್ಟಿನಲ್ಲಿ ಸ್ಕೀಂ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಈ ಮೂಲಕ ತಮಿಳುನಾಡಿನ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಪರೋಕ್ಷ ಚಾಟಿ ಬೀಸಿತ್ತು. ಎಲ್ಲ ರಾಜ್ಯಗಳನ್ನು ಸಮಾನವಾಗಿ ಪರಿಗಣಿಸಿಲಾಗಿದೆ. ರಾಜ್ಯಗಳ ಜನರು ಶಾಂತಿ ರೀತಿಯಿಂದ ವರ್ತಿಸುವಂತೆ ಮನವಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೂ ಸೂಚಿಸಿತ್ತು.