ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ (ಎಂಎಸ್ ಡಬ್ಲ್ಯೂ ) ವಿದ್ಯಾರ್ಥಿಗಳು, ಒಡಿಯೂರು ಗ್ರಾಮವಿಕಾಸ ಯೋಜನೆಯ ಸಹಯೋಗದೊಂದಿಗೆ ವಾಮಂಜೂರಿನ ಎಸ್.ಡಿ.ಎಂ ಮಂಗಳಜ್ಯೋತಿ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ʼInspire and Insperity ಎಂಬ ಕಾರ್ಯಕ್ರಮ ನಡೆಸಿಕೊಟ್ಟರು.
ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಅಂತಾರಾಷ್ಟ್ರೀಯ ವಿಶೇಷ ಸಾಮರ್ಥ್ಯದವರ ಕ್ರಿಕೆಟ್ ತಂಡದ ಸ್ಪಿನ್ ಬೌಲರ್ ಶಂಕರ್ ಸಜ್ಜನ್ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಸಂಸ್ಥೆ ಯವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಎಸ್.ಡಿ.ಎಂ ಮಂಗಳಜ್ಯೋತಿ ಸಂಸ್ಥೆಯ ಮುಖ್ಯೋಪಾಧ್ಯಾಯ ರಮೇಶ್ ಆಚಾರ್ಯ ಕೆ ಅಧ್ಯಕ್ಷತೆ ವಹಿಸಿದ್ದರು.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸಂಯೋಜಕ ಕಿರಣ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕ ದೀಪಕ್ ಬಿ ಉಪಸ್ಥಿತರಿದ್ದರು. ವಿಭಾಗದ ವಿದ್ಯಾರ್ಥಿನಿಯರಾದ ಶಿಲ್ಪಾ ದೊಡ್ಡಪ್ಪ, ವಾಣಿಶ್ರೀ, ಶ್ವೇತಾ, ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.