Monday, January 20, 2025
ಬೆಂಗಳೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಕೃಷಿ ಸಚಿವ ಬಿ.ಸಿ.ಪಾಟೀಲ್ -ಕಹಳೆ ನ್ಯೂಸ್

ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಕೋರ್ಟ್ ಗೆ ಹೋಗುವುದು ನನ್ನ ಹಕ್ಕು, ಅದನ್ನು ಪ್ರಶ್ನಿಸುವುದಕ್ಕೆ ಕಾಂಗ್ರೆಸ್ ನವರಿಗೆ ಏನು ಹಕ್ಕಿದೆ. ಕಾಂಗ್ರೆಸ್ ನಾಯಕರು ನೀತಿ ಸಿದ್ಧಾಂತದ ಮೇಲೆ ಹೋರಾಟ ಮಾಡಬೇಕು. ಅವರ ಹೋರಾಟಕ್ಕೆ ಅವರಿಗೆ ಏನೂ ವಿಷಯ ಸಿಗುತ್ತಿಲ್ಲ. ಹೀಗಾಗಿ ಸರ್ಕಾರವನ್ನು ತೆಗೆದ ಕಾರಣಕ್ಕೆ ನಮ್ಮ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು