Monday, January 20, 2025
ಸುದ್ದಿ

ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯ ಜೀವ ಉಳಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರ-ಕಹಳೆ ನ್ಯೂಸ್

ಮಂಗಳೂರು : ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮೇಶ್ವರ ಸಮುದ್ರ ವಿಹಾರಕ್ಕೆ ಉತ್ತರ ಪ್ರದೇಶ ಮೂಲದ 11 ಮಂದಿ ಬಂದಿದ್ದರು. ಇವರಲ್ಲಿ ನಾಲ್ಕು ಮಂದಿ ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದರು. ಇದರಲ್ಲಿ ಯುವಕನೋರ್ವ ಸಮುದ್ರದ ಅಲೆಗಳ ನಡುವೆ ಸಿಲುಕಿ ಸುಮಾರು 40ಮೀ ನಷ್ಟು ದೂರ ಎಳೆದೊಯ್ದಿದ್ದರು. ಈ ಘಟನೆಯನ್ನು ಕಂಡ ಕರಾವಳಿ ಕಾವಲು ಪಡೆ ಸಿಬ್ಬಂದಿ ಅಶೋಕ್ ಸೋಮೇಶ್ವರ ಹಾಗೂ ಸ್ಥಳೀಯ ಈಜುಗಾರ ಕಿರಣ್ ಒಂಭತ್ತುಕೆರೆ ಎಂಬವರು ಸೇರಿ ಸಮುದ್ರಕ್ಕೆ ಧುಮುಕಿ ಬಹಳಷ್ಟು ಸೆಣಸಾಡಿ ಯುವಕನನ್ನು ದಡ ಸೇರಿಸಿ ಪ್ರಾಣವನ್ನು ರಕ್ಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು