ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು, ಮಾಸ್ಕ್ ಧರಿಸದವರಿಗೆ 250 ರೂ.ಗಳ ದಂಡ..! ಸಚಿವ ಕೆ.ಸುಧಾಕರ್-ಕಹಳೆ ನ್ಯೂಸ್
ಬೆಂಗಳೂರು : ಆರೋಗ್ಯ ಸಚಿವ ಕೆ.ಸುಧಾಕರ್ ಅವರು ರಾಜ್ಯದಲ್ಲಿ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸದೇ ಇದ್ದರೆ 250 ರೂ. ಗಳ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಹಾಗೆಯೇ ಅವರು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಒಂದು ವೇಳೆ ಯಾರಾದರೂ ಧರಿಸದೇ ಇದ್ದರೆ 250 ರೂ. ದಂಡ ವಿಧಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಪಾಲನೆಯ ಉಸ್ತುವಾರಿಗಾಗಿ ಮಾರ್ಷಲ್‍ಗಳನ್ನು ನೇಮಕ ಮಾಡುವುದಾಗಿ ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಹಾಗೂ ಮದುವೆ, ಸಭೆ-ಸಮಾರಂಭ, ಧಾರ್ಮಿಕ ಕಾರ್ಯಗಳು, ರಾಜಕೀಯ ಕಾರ್ಯಕ್ರಮಗಳಿಗೆ ಹೆಚ್ಚು ಜನರು ಸೇರದಂತೆಯೂ ನಿಬಂಧನೆ ಹಾಕಲಿದ್ದೇವೆ. ಇದನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚಿಸಿದರು. ಮದುವೆ ಸಮಾರಂಭಗಳಿಗೆ ಇಂತಿಷ್ಟು ಪ್ರಮಾಣದ ಜನರು ಸೇರಬೇಕು. ಕಲ್ಯಾಣ ಮಂಟಪಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಇರದಂತೆ ಮತ್ತು ಕೋವಿಡ್ ನಿಯತಮಗಳ ಕಡ್ಡಾಯ ಪಾಲನೆಯನ್ನು ಆಯೋಜಕರೇ ನೋಡಿಕೊಳ್ಳಬೇಕು ಎಂದರು. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ಕಲ್ಯಾಣ ಮಂಟಪದ ಆಯೋಜಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.