Monday, January 20, 2025
ಪುತ್ತೂರು

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತ ಲ್ಯಾಪ್‌ಟಾಪ್-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಪಿ. ಮಾತನಾಡಿ ಎಂಬಿಎಯಂತಹ ಸ್ನಾತಕೋತ್ತರದ ಕಲಿಕೆಯು ವ್ಯಕ್ತಿಯೊಬ್ಬನ ಜೀವನದ ಗತಿಯನ್ನು ಬದಲಾಯಿಸುತ್ತದೆ ಎಂದರು. ಹೆಚ್ಚಿನ ಜ್ಞಾನ ಮತ್ತು ನಾಯಕತ್ವ ಗುಣಗಳನ್ನು ಒದಗಿಸುವುದರ ಜತೆಯಲ್ಲಿ ಕಾರ್ಪೋರೇಟ್ ಜಗತ್ತಿನ ಪರಿಚಯವನ್ನು ಮಾಡಿಕೊಡುತ್ತವೆ ಎಂದರು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯನ್ನು ಇನ್ನೂ ಹೆಚ್ಚಿಸುವುದಕ್ಕಾಗಿ ಈ ಲ್ಯಾಪ್‌ಟಾಪ್‌ಗಳು ಸಹಕಾರಿಯಾಗಲಿವೆ ಎಂದು ನುಡಿದರು.

ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ಮಾತನಾಡಿ ಮುಂದಿನ ದಿನಗಳಲ್ಲಿ ದೊಡ್ಡ ದೊಡ್ಡ ಕಾರ್ಪೋರೇಟ್ ಸಂಸ್ಥೆಗಳನ್ನು ಮುನ್ನಡೆಸುವ ಮಹತ್ತರ ಜವಾಬ್ಧಾರಿಯನ್ನು ಹೊಂದುವ ನೀವು ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು ಇದರಿಂದ ಸಂಸ್ಥೆಗೂ ನಿಮಗೂ ಏಳಿಗೆಯಾಗುತ್ತದೆ ಎಂದರು. ಕಾಲೇಜಿನ ವಿವಿಧ ಸವಲತ್ತುಗಳನ್ನು ಬಳಸಿಕೊಂಡು ಉತ್ತಮರಾಗುವುದರ ಜತೆಗೆ ಸಮಾಜದ ಉನ್ನತಿಗಾಗಿ ಶ್ರಮಿಸಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರುಗಳಾದ ರವಿಕೃಷ್ಣ ಡಿ ಕಲ್ಲಾಜೆ, ಸುಬ್ರಮಣ್ಯ ಭಟ್ ಟಿ.ಎಸ್. ವಿತರಣಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್ ಎಸ್ ಅಯ್ಯರ್ ಸ್ವಾಗತಿಸಿ, ಪ್ರೊ. ರಾಕೇಶ್ ಎಂ ವಂದಿಸಿದರು.