Sunday, November 24, 2024
ಬಂಟ್ವಾಳ

ತಾಲೂಕು ಸಮ್ಮೇಳನಾಧ್ಯಕ್ಷರ ಸಮ್ಮಿಲನ ಕಾರ್ಯಕ್ರಮ, ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ; ಡಾ.ಬಿ.ಎ.ವಿವೇಕ ರೈ-ಕಹಳೆ ನ್ಯೂಸ್

ಬಂಟ್ವಾಳ : ಕೆಲವೊಂದು ರಾಷ್ಟ್ರಗಳಲ್ಲಿ ಮಕ್ಕಳ ಸಾಹಿತ್ಯಕ್ಕೆ ಸಿಗುವಂತೆ ದೇಶದಲ್ಲಿ ಕೂಡಾ ಸಾಹಿತ್ಯಾಭಿರುಚಿ ಮತ್ತು ಓದುವ ಹವ್ಯಾಸ ಬೆಳೆಸಲು ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿನ ಬಿ.ಸಿ.ರೋಡು ಕೈಕುಂಜೆ ನೂತನ ರಂಗ ಮಂದಿರದಲ್ಲಿ ಕಸಾಪ ವತಿಯಿಂದ ಶನಿವಾರ ಸಂಜೆ ನಡೆದ ತಾಲೂಕು ಸಮ್ಮೇಳನಾಧ್ಯಕ್ಷರ ಸಮ್ಮಿಲನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತ್ಯಕ್ಕೆ ನಿವೃತ್ತಿ ಎಂಬುವುದು ಇಲ್ಲ. ಸಾಹಿತ್ಯದಿಂದ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಬಂಧುತ್ವ ಹೆಚ್ಚುತ್ತದೆ. ಜಿಲ್ಲೆಯಲ್ಲಿ ಯಕ್ಷಗಾನ ಮತ್ತು ಪ್ರಾಚೀನ ಅಧ್ಯಯನ ಗ್ರಂಥ ಭಂಡಾರ ಇದೆ ಎಂದರು. ಕೆನರಾ ಬ್ಯಾಂಕಿನ ಜನರಲ್ ಮೆನೇಜರ್ ಬಿ.ಯೋಗೀಶ ಆಚಾರ್ಯ ಶುಭ ಹಾರೈಸಿದರು. ಸಮ್ಮೇಳನ ಪೂರ್ವಾಧ್ಯಕ್ಷರಾದ ಡಾ.ಪಾದೆಕಲ್ಲು ವಿಷ್ಣು ಭಟ್, ಡಾ.ಧರಣೀದೇವಿ ಮಾಲಗತ್ತಿ, ಅಂಶುಮಾಲಿ, ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ,, ಡಾ.ಪುಂಡಿಕಾಯಿ ಗಣಪಯ್ಯ ಭಟ್, ಡಾ.ಕೆ.ತುಕಾರಾಮ ಪೂಜಾರಿ ಅನಿಸಿಕೆ ಮಂಡಿಸಿದರು. ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ರೋಟರಿ ಕ್ಲಬ್ ಅಧ್ಯಕ್ಷ ಕೆ.ಪದ್ಮನಾಭ ರೈ ಇದ್ದರು. ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಸ್ವಾಗತಿಸಿ, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ವಂದಿಸಿದರು. ಡಾ.ನಾಗವೇಣಿ ಮಂಚಿ, ರಮಾನಂದ ನೂಜಿಪಾಡಿ, ಜಯಾನಂದ ಪೆರಾಜೆ ನಿರೂಪಿಸಿದರು.