ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಸುನಂದರವರ ಉತ್ತರಕ್ರಿಯೆಯನ್ನು ಮಾಡಲು ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್
ಪುತ್ತೂರು : ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಸುನಂದರವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿರುತ್ತಾರೆ.
ಇವರ ಉತ್ತರಕ್ರಿಯೆಯನ್ನು ಮಾಡಲು ಇವರ ಅಣ್ಣ ಗುರುವ ಎಂಬವರಿಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ನೀಡಿದರು.