Tuesday, January 21, 2025
ಪುತ್ತೂರು

ಹೃದಯಾಘಾತದಿಂದ ವಿವೇಕಾನಂದ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ 16ವರ್ಷದ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳ್ಳಿಪ್ಪಾಡಿ ಗ್ರಾಮದ ಕುಂಡಾಪು ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿನ ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಶ್ರೇಯಾ ಪಕ್ಕಳ ಹಲವು ದಿನಗಳಿಂದ ಆರೋಗ್ಯದ ಸಮಸ್ಯೆಯಿಂದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಸಿಕೊಂಡಿದ್ದರು. ಕಳೆದ ರಾತ್ರಿ ಆಕೆಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು