Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬೆಳ್ಳಂ ಬೆಳಗ್ಗೆ ಕರ್ತವ್ಯದಲ್ಲಿದ್ದ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..! – ಕಹಳೆ ನ್ಯೂಸ್

ವಿಟ್ಲ: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ.

ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಯೊರ್ವ ಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಕಾರ್ಯಚರಣೆ ನಡೆಸಿದ ಸಿಬ್ಬಂದಿ ಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದಲ್ಲಿ ಗುಂಡಿನ ದಾಳಿ ನಡೆಸಿ ವಿಟ್ಲ ಮೂಲಕ ಪರಾರಿಯಾಗಲು ಮುಂದಾಗುತ್ತಿದ್ದಂತೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಟ್ಲ ಎಸ್ಐ ನೇತೃತ್ವದ ತಂಡ ಆರೋಪಿಗಳನ್ನು ಅಡ್ಡಗಟ್ಟಲು ಮುಂದಾದಾಗ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು