Monday, January 20, 2025
ಬೆಂಗಳೂರು

ಇಂದು ಭಾರತ್ ಬಂದ್ ; ರಾಜ್ಯದಲ್ಲಿ ಬಸ್ ಸಂಚಾರದ ಮೇಲೆ ನೋ ಎಫೆಕ್ಟ್ -ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಯುಕ್ತ ಕಿಸಾನ್ ಮೋರ್ಚಾ ದಿಂದ ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂಧೆಗಳನ್ನು ವಿರೋಧಿಸಿ, ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಭಾರತ್ ಬಂದ್ ಸಂದರ್ಭದಲ್ಲಿ ಇದುವರೆಗೆ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಇಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆ ನೀಡಲಾಗಿದ್ದು, ಮತ್ತು ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಾಪಾಸ್ ಗೆ ಆಗ್ರಹಿಸಿ ರೈತರು ನಡೆಸುತ್ತಿರುವಂತ ಪ್ರತಿಭಟನೆಗೆ 4 ತಿಂಗಳು ತುಂಬಿದ ಕಾರಣ ಭಾರತ್ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ. ಕರ್ನಾಟಕದಲ್ಲಿ ಅಲ್ಪ ಮಟ್ಟಿಗೆ ಭಾರತ್ ಬಂದ್ ಬಿಸಿ ಮುಟ್ಟಿದ್ದರು, ಬೆಳಿಗ್ಗೆ 6 ಗಂಟೆಯಿಂದ ಆರಂಭಗೊಂಡಿರುವಂತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಎಂದಿನಂತೆ ಸಂಚರಿಸುತ್ತಿದ್ದರೇ, ಹಾಗೂ ಕೆಎಸ್‍ಆರ್ ಟಿಸಿ ಬಸ್ ಸಂಚಾರ ಕೂಡ ಯಥಾಸ್ಥಿತಿಯಲ್ಲಿ ಇದ್ದು, ಸಾರಿಗೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು