Sunday, January 19, 2025
ಹೆಚ್ಚಿನ ಸುದ್ದಿ

ಬಾಗೇಪಲ್ಲಿಯಲ್ಲಿ ಬಂದ್ ಇಲ್ಲ ; ಭಾರತ್ ಬಂದ್ ಬೆಂಬಲಿಸಿ ಬಾಗೇಪಲ್ಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯ ಅಂಗವಾಗಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಬಾಗೇಪಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸ್ಥಾಪಿಸಿದ ಪಿ.ಎಸ್.ಎಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತದನಂತರ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗೂಳೂರು ವೃತ್ತದಿಂದ ಹೊರಟಪ ಪ್ರತಿಭಟನೆ ಮೆರವಣಿಗೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನರೇಂದ್ರ ಮೋದಿ ಯವರ ಅಣಕು ಶವ ಯಾತ್ರೆ ಮಾಡಿ ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಮಾತನಾಡಿ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ 123 ದಿನಗಳನ್ನು ಪೂರೈಸಿದೆ. 315 ರೈತರು ಇದುವರೆಗೆ ಸಾವನ್ನಪ್ಪಿದ್ದಾರೆ.

ಆದರೆ, ಅದರ ಬಗ್ಗೆ ಇದುವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಕಾರ ಎತ್ತಿಲ್ಲ. ಕೃಷಿ ಕಾಯ್ದೆಗಳಿಂದ ರೈತ ಕುಲ ನಾಶವಾಗಲಿದೆ. ರೈತರನ್ನು ಕೃಷಿಯಿಂದ ವಿಮುಖಗೊಳಿಸುವ ಹುನ್ನಾರವಿದೆ. ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದರು. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇಂತಹ ಜ್ವಲಂತ ವಿಷಯಗಳ ಕುರಿತು ವಿಧಾನಸಭೆಯಲ್ಲಿ ಚರ್ಚಿಸುವುದು ಬಿಟ್ಟು ರಮೇಶ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ಸಿ.ಡಿ. ಪ್ರಕರಣದ ಕುರಿತು ಚರ್ಚಿಸಿರುವುದು ಎಷ್ಟು ಸರಿ’ ಎಂದು ಕಿಡಿ ಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಈಶ್ವರೆಡ್ಡಿ ಮಾತನಾಡಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಇಡೀ ರೈತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಭಟನಾಕಾರರನ್ನ ತಡೆಯುತ್ತಿರುವುದು, ಪ್ರತಿಭಟನೆಗೆ ಅಡ್ಡಿಮಾಡುತ್ತಿರುವುದು ನಾಚಿಕೆಗೇಡಿನ ಕೆಲಸ. ಪ್ರಜಾಪ್ರಭುತ್ವ ಉಳಿಸಲು ನಮ್ಮ ಹೋರಾಟ ಮುಂದುವರೆಯುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಿ.ಎಸ್. ಎಸ್.ಜಿಲ್ಲಾ ಸಂಚಾಲಕ ಚನ್ನರಾಯಪ್ಪ , ಎಲ್.ವೆಂಕಟೇಶ್,ರೈತ ಮಹಿಳೆ ಪ್ರಮೀಳಾ, ಜಬೀವುಲ್ಲಾ, ಪಾತಪಾಳ್ಯ ರಂಗನಾಥ ಇನ್ನೂ ಅನೇಕ ಪಾಲ್ಗೊಂಡಿದ್ದರು.