Sunday, January 19, 2025
ಉಡುಪಿ

ಉಡುಪಿಯ ಮಠದಬೆಟ್ಟು ಎಂಬಲ್ಲಿ ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಮಠದಬೆಟ್ಟು ಎಂಬಲ್ಲಿ ನಿನ್ನೆ ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯನ್ನು 30 ವರ್ಷದ ಉತ್ತಮ್ ನಾಯಕ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಆತ್ರಾಡಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಾಗಿದ್ದು, ನಾಲ್ಕೈದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಅವರ ಪತ್ನಿ ಮುಂಬೈನಲ್ಲಿ ನೆಲೆಸಿದ್ದರು, ಮತ್ತು ಇವರು ಮಠದ ಬೆಟ್ಟುವಿನಲ್ಲಿರುವ ಫ್ಯ್ಲಾಟ್ ನ 3 ನೇ ಮಹಡಿಯಲ್ಲಿ ವಾಸವಾಗಿದ್ದರು. ಆದರೆ, ನಿನ್ನೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು