Friday, September 20, 2024
ಸುದ್ದಿ

ಎಚ್ಚರ..! ಇಂದು, ನಾಳೆ ಕರ್ನಾಟಕ ಕರಾವಳಿ, ಒಳನಾಡಿನಲ್ಲಿ ಭಾರೀ ಮಳೆ

ನವದೆಹಲಿ: ಕೇರಳದ ಕೆಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕದ ಕರಾವಳಿ ಮತ್ತು ಒಳನಾಡು ಭಾಗದಲ್ಲಿ ಗುಡುಗು ಮತ್ತು ರಭಸದ ಗಾಳಿಯಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರಿಗೆ ನೀರಿಗೆ ಇಳಿಯದಂತೆ ಸೂಚಿಸಲಾಗಿದೆ. ಭಾನುವಾರದಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಮಳೆ ಆಗುವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಅಲ್ಲದೇ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಮ್‌, ತ್ರಿಪುರಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ದಟ್ಟವಾಗಿದೆ.