Recent Posts

Monday, January 20, 2025
ಹೆಚ್ಚಿನ ಸುದ್ದಿ

ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ಅಪಘಾತ, ರಿಕ್ಷಾ ಚಾಲಕ ಸ್ಥಳದಲ್ಲೇ ದಾರುಣ ಸಾವು-ಕಹಳೆ ನ್ಯೂಸ್

ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ರಿಕ್ಷಾ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ಮೃತಪಟ್ಟವರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ 45 ವರ್ಷದ ಶ್ಯಾಮಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭದಲ್ಲಿ ಕಾರು ಢಿಕ್ಕಿ ಹೊಡೆದಿದ್ದು, ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ ಹೊಡೆದಿದ್ದಾನೆ. ರಿಕ್ಷಾದ ಹಿಂಬದಿಗೆ ಕಾರು ಢಿಕ್ಕಿ ಹೊಡೆಯುತ್ತಿದ್ದಂತೆ , ಸೇತುವೆಯ ಬದಿಯಲ್ಲಿ ಅಳವಡಿಸಿದ ಗಿಂಡಿಗೆ ರಿಕ್ಷಾ ತಗಲಿ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಸೈಗೋಳಿ ರಿಕ್ಷಾ ಪಾರ್ಕಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಶ್ಯಾಮಪ್ರಸಾದ್ ಕುಟುಂಬದ ಆಧಾರಸ್ತಂಭವಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು