Recent Posts

Monday, January 20, 2025
ಬೆಂಗಳೂರು

ಬೆಂಗಳೂರು ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆ-ಕಹಳೆ ನ್ಯೂಸ್

ಬೆಂಗಳೂರು : ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿ ಪ್ರತಿ ವಾರ್ಡ್‍ಗಳಿಗೆ 50 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರವನ್ನು ಶುಚಿಗೊಳಿಸಲು ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಲ್ಯಾಣ ಬಿಬಿಎಂಪಿಯ ಪ್ರಮುಖ ಜವಾಬ್ದಾರಿಯಾಗಿದ್ದು , ಪೌರ ಕಾರ್ಮಿಕರಿಗೆ ಅಗತ್ಯ ಸಲಕರಣೆಗಳ ಖರೀದಿಗಾಗಿ ಪ್ರತಿ ತಿಂಗಳು 200 ರೂ. ನೀಡಲು ಉದ್ದೇಶಿಸಲಾಗಿದೆ. ಇದರಿಂದ ಅವರಿಗೆ ವಾರ್ಷಿಕ 2400 ರೂ.ಗಳನ್ನು ನೀಡಲು ತೀರ್ಮಾನಿಸಲಾಗಿದ್ದು, ಪೌರ ಕಾರ್ಮಿಕರಿಗೆ ಹಣಕಾಸು ನೆರವು ನೀಡುತ್ತಿರುವುದರಿಂದ ಇನ್ನು ಮುಂದೆ ಪಾಲಿಕೆ ಸ್ವಚ್ಛತಾ ಪರಿಕರಗಳನ್ನು ಖರೀದಿಸುವುದಕ್ಕೆ ಬ್ರೇಕ್ ಬೀಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು