Tuesday, January 21, 2025
ಹೆಚ್ಚಿನ ಸುದ್ದಿ

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಟೆಂಪೋ ಲಾರಿ ನಡುವೆ ಭೀಕರ ಅಪಘಾತ ; 8 ಮಂದಿ ಸಾವು, 6 ಮಂದಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ನೆಲ್ಲೂರು : ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ರವಿವಾರ ಲಾರಿಗೆ ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಎಂಟು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಟೆಂಪೋ ಮೂಲಕ ಶ್ರೀಶೈಲಂ ಮತ್ತು ಇತರೆ ದೇವಾಲಯಕ್ಕೆ ತಮಿಳುನಾಡು ಮೂಲದ ಭಕ್ತರು ಭೇಟಿ ನೀಡಿ ಪ್ರಯಾಣ ಮುಂದುವರೆಸಿದ್ದರು. ರವಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬುಚ್ಚಿರೇಡಿಪಲೆಂ ಮಂಡಲದ ದಾಮರಮಡುಗು ಗ್ರಾಮದ ಬಳಿ ಟೆಂಪೋ ತೆರಳುತ್ತಿದ್ದು, ಈ ವೇಳೆ ಸರಕು ತುಂಬಿದ್ದ ಲಾರಿಯೊಂದಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಎಂಟು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.