Recent Posts

Sunday, January 19, 2025
ರಾಜಕೀಯ

ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ

ಮಂಗಳೂರು, ಏ 14: ನಗರದ ಮಹಿಳಾ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ಯ ಬಿಜೆಪಿ ಪಕ್ಷವು, ಕಾಂಗ್ರೆಸ್ ಪಕ್ಷದ ವಿರುದ್ದ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಅವರ ಹೆಸರು ಮತ್ತು ಭಾವಚಿತ್ರ ಬಳಸಿದ್ದರು. ಈ ಹಿನ್ನೆಲೆ ಪ್ರತಿಭಾ ಕುಳಾಯಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಶೋಭಾ ಕರಂದ್ಲಾಜೆ, ರವಿಶಂಕರ್ ಪ್ರಸಾದ್ ಹೀಗೆ ಐವರು ಕಾರ್ಯಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
Prathibha Kulai

ತನ್ನ ಭಾವಚಿತ್ರ ಹಾಗೂ ಹೆಸರು ಬಳಸಿರುವುದರಿಂದ ನನಗೆ ಮಾನಸಿಕ ಹಿಂಸೆಯಾಗಿದೆ. ಚಾರ್ಜ್ ಶೀಟ್ ನಲ್ಲಿ ಭಾವಚಿತ್ರ ಹಾಗೂ ಹೆಸರು ಬಳಸಿ ನನ್ನ ಮಾನಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಪ್ರತಿಭಾ ಕುಳಾಯಿ ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಏ 19 ರಂದು ವಿಚಾರಣೆ ನಡೆಯಲಿದೆ.