Monday, January 20, 2025
ಬೆಂಗಳೂರು

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೋಮವಾರ ಸಚಿವರು ಮತ್ತು ವಲಯ ಉಸ್ತುವಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಸಭೆ ನಡೆಯಲಿದ್ದು, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಹಾಗೆಯೇ ಸಿಎಂ ಅವರು ಸಚಿವರುಗಳಿಂದ ಅಭಿಪ್ರಾಯ ಪಡೆದುಕೊಂಡು, ಕಠಿಣ ಕ್ರಮಗಳನ್ನು ಜಾರಿಗೊಳಿಸಲು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು “ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಕೊರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಸಾಕಾಗುವುದಿಲ್ಲ. ಗಡಿಭಾಗಗಳಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಈ ವಿಚಾರದ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು