ಮಂಗಳೂರು : ರಾಜ್ಯದ ಕರಾವಳಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಭದ್ರಕೋಟೆಯಾಗಿರುವ ಕರಾವಳಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರೋದೇ ಸರ್ಕಾರಕ್ಕೆ ವರದಾನ. ಹೀಗಾಗಿ ಈ ಕ್ಷೇತ್ರಗಳ ಹೊಡೆದುರುಳಿಸಲು ಬಿಜೆಪಿಯೂ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗ ಎಂಬಂತೆ ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಆ ಚುನಾವಣೆಯಲ್ಲಿ ಬಿಜೆಪಿಯ ಆಂತರಿಕ ಕಲಹ, ಬಿಜೆಪಿಯ ಓವರ್ ಕಾನ್ಪಿಡೆಂಟ್ ಸೋಲಿಗೆ ಮುಳುವಾಗಿತ್ತು. ಹೀಗಾಗಿ ಈ ಬಾರಿ ಶತಾಯಗತಾಯ ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ ಪ್ರಯತ್ನ ಪಡುತ್ತಿದೆ.
ಬಿಜೆಪಿಯ ಹೈಕಮಾಂಡ್ ಈ ಬಾರಿ ಸ್ವತಃ ರಣರಂಗಕ್ಕೆ ಇಳಿಯಲು ತಯಾರಿ ನಡೆಸಿದೆ. ಅದರ ಮೊದಲ ಪ್ರಯತ್ನವಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಇಂದು ಆಗಮಿಸುತ್ತಿದ್ದಾರೆ.
ಅಕ್ಟೋಬರ್ 4ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ. ಅಕ್ಟೋಬರ್ 4 ರಂದು ಇಡೀ ದಿನ ಮಂಗಳೂರಿನಲ್ಲಿ ಪಕ್ಷ ಸಂಘಟನೆ ಹಾಗೂ ಇತರ ವಿಷಯಗಳ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಒಟ್ಟಿನಲ್ಲಿ ಕರಾವಳಿ ವಶಕ್ಕೆ ಅಮಿತ್ ಶಾ ರಣೋತ್ಸಾದಲ್ಲಿ ಇದ್ದು ಕಾರ್ಯಕರ್ತರಿಗೆ ಇನ್ನಷ್ಟು ಉತ್ತೇಜನ ನೀಡಲು ಮಾಸ್ಟರ್ ಪ್ಲಾನ್ ತಯಾರಿಸಿ ಕರಾವಳಿಗೆ ಕಾಲಿಡುತ್ತಾ ಇದ್ದಾರೆ.