Sunday, November 24, 2024
ಸುದ್ದಿ

ದಕ್ಷಿಣ ಕನ್ನಡದಲ್ಲಿ ನಡೆಯುವ ಎಲ್ಲಾ ಪ್ರತಿಭಟನೆ, ಹಬ್ಬ, ಸಭೆ, ಸಮಾರಂಭಗಳಿಗೆ ಬ್ರೇಕ್, ಜಿಲ್ಲಾಧಿಕಾರಿಯಿಂದ ಆದೇಶ- ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಕೊವೀಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ 15 ದಿನಗಳ ಕಾಲ ಯಾವುದೇ ಪ್ರತಿಭಟನೆ ಮತ್ತು ರಾಜಕೀಯ ರ‍್ಯಾಲಿಗಳನ್ನು ನಡೆಸಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ನಿಷೇದಾಜ್ಞೆಯನ್ನ ಜಾರಿಗೊಳಿಸಿದ್ದಾರೆ. ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈ ಡೇ ಇತ್ಯಾದಿ ಸಂದರ್ಭಗಳಲ್ಲಿ ರಾಜ್ಯದ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಸಾರ್ವಜನಿಕ ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳು, ಇತ್ಯಾದಿಗಳಲ್ಲಿ ಸಾರ್ವಜನಿಕ ಸಮಾರಂಭಗಳನ್ನ, ಸಭೆಗಳನ್ನು ನಡೆಸದಂತೆ ಆದೇಶಿಸಿದ್ದಾರೆ.


ಇನ್ನೂ ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಲಾಗಿದೆ. ಎಲ್ಲಾ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವುದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈ ಡೇ ಇತ್ಯಾದಿ ಸಂದರ್ಭಗಳಲ್ಲಿ ರಾಜ್ಯದ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಸಾರ್ವಜನಿಕ ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳು, ಇತ್ಯಾದಿಗಳಲ್ಲಿ ಸಾರ್ವಜನಿಕ ಸಭೆ-ಸಮಾರಂಭಗಳನ್ನ, ನಡೆಸುವುದನ್ನು, ಹಾಗೂ ಜಾತ್ರೆಗಳು, ಮೇಳಗಳನ್ನು, ನಡೆಸುವುದನ್ನು ನಿಷೇಧಿಸಿಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದೇ ಇದ್ದರೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇದ್ದರೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ, ಕೊವೀಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸದೇ ಇದ್ದರೆ ಕಾನೂನು ಕ್ರಮವಹಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ಚರಿಕೆಯನ್ನ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು