Sunday, November 24, 2024
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶಕ್ಕೆ ಉಸ್ತುವಾರಿ ಸಚಿವ ಕೋಟಾ ಸ್ಪಷ್ಟನೆ ; ಈಗಾಗಲೇ ನಿಗದಿ ಪಡಿಸಿದ ಯಕ್ಷಗಾನ, ಕೋಲ, ನೇಮ, ಪೂಜೆ – ಧಾರ್ಮಿಕ ಕಾರ್ಯಕ್ರಮ ನಡೆಸಲು ನೋ ಟೆನ್ಷನ್..! ಕೋಟಾ ಶ್ರೀನಿವಾಸ ಪೂಜಾರಿ ಅವರು ನೀಡಿರುವ ಹೇಳಿಕೆ ಏನು..!? – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ವೈರಸ್‌ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಧಾರ್ಮಿಕ ಆಚರಣೆ, ಸಭೆ ಸಮಾರಂಭ ನಡೆಸದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದರು.

ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದಲೇ 144 (3) ಸೆಕ್ಷನ್‌ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ- ಬರತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾಧಿಕಾರಿ ಆದೇಶದಲ್ಲೇನಿದೆ..!?

ಜಾಹೀರಾತು
ಜಾಹೀರಾತು
ಜಾಹೀರಾತು

ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌29ರಿಂದ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶಿಸಿದ್ದರು.

ಆದರೆ, ಜ‌ನ ಈ ಆದೇಶ ಹೊರಬರುತ್ತಿದ್ದಂತೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಗೊಂದಲಕ್ಕೀಡಾಗಿದ್ದರು, ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಈಗ ಉಸ್ತುವಾರಿ ಸಚಿವ ಕೋಟಾ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ನಿಗದಿ ಪಡಿಸಿದ ಯಕ್ಷಗಾನ, ಕೋಲ, ನೇಮ, ಪೂಜೆ – ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ತೊಂದರೆ ಇಲ್ಲ, ಆದರೆ ಕೋವಿಡ್ – 19 ನಿಯಮಾವಳಿಗಳನ್ನು ಪಾಲಿಸಿಕೊಂಡು ನಡೆಸಬೇಕು ಮತ್ತು ಜಿಲ್ಲಾಧಿಕಾರಿಯುವರಿಗೆ ಮರು ಆದೇಶ ಮಾಡಲು ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿರುವದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶಕ್ಕೆ ಉಸ್ತುವಾರಿ ಸಚಿವ ಕೋಟಾ ಸ್ಪಷ್ಟನೆ :