Monday, January 20, 2025
ಬೆಂಗಳೂರು

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಟಾಕ್ಸಿ ಚಾಲಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು : ಟಾಕ್ಸಿ ಚಾಲಕನೋರ್ವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಟಾಕ್ಸಿ ಚಾಲಕ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಹಾಗೂ ಚನ್ನಪಟ್ಟಣ ಮೂಲದ 32 ವರ್ಷದ ಯುವಕ ಪ್ರತಾಪ್ ಕುಮಾರ್ ಎಂದು ತಿಳಿದುಬಂದಿದೆ. ಲಾಕ್ ಡೌನ್ ಬಳಿಕ ಬಾಡಿಗೆ ದರ ಕಡಿಮೆಯಾಗಿದ್ದು, ಬಾಡಿಗೆ ಕೂಡ ದೊರೆಯುತ್ತಿರಲಿಲ್ಲ. ಈ ನಡುವೆ ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದ್ದು, ಇದರಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರತಾಪ್ ಕುಮಾರ್ ಅವರು ಏರ್ ಪೋರ್ಟ್ ಸಮೀಪ ಟ್ಯಾಕ್ಸಿಯಲ್ಲಿಯೇ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು