ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ ಕಣ್ಮುಚ್ಚಿ ಕುಳಿತ ತಾಲೂಕು ಅಧಿಕಾರಿಗಳು ;ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ-ಕಹಳೆ ನ್ಯೂಸ್
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯ ಅಡಿಯಲ್ಲಿ ಸರಕಾರಕ್ಕೆ ಮೋಸ ಮಾಡಿ ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಲು ಕೋಡ್ಲಾಪುರ ಗ್ರಾಮ ಪಂಚಾಯಿತಿ ಮುಂದಾಗಿದೆ.
ಮತ್ತು ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಶ್ವಥಪ್ಪ ಬಿನ್ ಅಂಜಿನಪ್ಪ ರವರ ಜಮೀನಿನಲ್ಲಿ ಕೃಷಿ ಹೊಂಡಾ ನಿರ್ಮಾಣ ಎಂಬ ಹೆಸರಿನ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರ ಬದಲಿಗೆ ಜೆಸಿಬಿ ಯಂತ್ರಗಳಿಂದ ಕಾಮಗಾರಿ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.
ಹಾಗೂ ನರೇಗಾ ಯೋಜನೆಯಡಿ 75 ಸಾವಿರ ರೂಪಾಯಿ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರನ್ನು ಬಳಸಬೇಕೆಂಬ ನಿಯಮ ಉಲ್ಲಂಘಿಸಿ ಜೆಸಿಬಿ ಯಂತ್ರಗಳ ಬಳಕೆಯಾಗಿದೆ. ಕಾರ್ಮಿಕರ ಬದಲಿಗೆ ಯಂತ್ರೋಪಕರಣ ಬಳಸುತ್ತಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧಿಕಾರಿಗಳು ಯಂತ್ರಗಳ ಮೂಲಕ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಕಾರ್ಮಿಕರಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಕಾರ್ಮಿಕರಿಗೆ ಕೆಲಸ ಕೊಡದೆ ದುರುಪಯೋಗ ಪಡಿಸಿ ಯಂತ್ರೋಪಕರಣಗಳ ಮೂಲಕ ಕೆಲಸವನ್ನು ಮಾಡಲು ಮುಂದಾಗಿರುವ ಕೋಡ್ಲಾಪುರ ಗ್ರಾಮ ಪಂಚಾಯಿತಿಗೆ ಕರ್ನಾಟಕ ಕಾರ್ಮಿಕರ ರಕ್ಷಣಾ ವೇದಿಕೆಯ ಮಧುಗಿರಿ ತಾಲೂಕು ಘಟಕದ ಅಧ್ಯಕ್ಷರಾದ ಮಾರುತಿ ರವರು ಎಚ್ಚರಿಕೆ ನೀಡಿದ್ದಾರೆ.