Saturday, February 1, 2025
ಸುದ್ದಿ

ಇಂದಿನಿಂದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳು ಪ್ರಾರಂಭ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ಈ ಬಾರಿ ಹೊಸ ವಿಧಾನ ಅಳವಡಿಸಿಕೊಂಡು ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿಕೊಂಡಿದ್ದು, ಎಲ್ಲಾ ಪರೀಕ್ಷೆಗಳು ಅಂತಿಮ ವೇಳಾಪಟ್ಟಿಯಲ್ಲಿ ನಿಗದಿಪಡಿಸಿದಂತೆ ಇಂದಿನಿಂದ ಪ್ರಾರಂಭವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿಶ್ವವಿದ್ಯಾನಿಲಯದ ಜೊತೆಗೂಡಿ ನಿಗದಿಪಡಿಸಿದಂತೆ ಪರೀಕ್ಷೆಯನ್ನು ನಡೆಸಿಕೊಡಲು ಎಲ್ಲಾ ಪ್ರಾಂಶುಪಾಲರುಗಳಲ್ಲಿ ಈಗಾಗಲೇ ಕೋರಲಾಗಿದೆ. ಹಾಗೂ ವಿದ್ಯಾರ್ಥಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೆ ಹೊಸ ಪದ್ಧತಿ ಪ್ರಕಾರ ನಡೆಯುವ ಪರೀಕ್ಷೆಗೆ ಸಹಕರಿಸುವಂತೆ ವಿವಿಯ ಕುಲಸಚಿವರು ವಿವಿಧ ಕಾಲೇಜುಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು