Sunday, November 24, 2024
ಹೆಚ್ಚಿನ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ನಿಗದಿತ ಗಡುವು ಮೀರಿದ್ದರೂ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಸಿಗದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಏಪ್ರಿಲ್ 7ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತವೆ ಎಂದು ಬಾಗೇಪಲ್ಲಿ ಕ.ರಾ.ರ.ಸಾ.ಸಂಸ್ಥೆ ಬಾಗೇಪಲ್ಲಿ ಘಟಕದ ಅಧ್ಯಕ್ಷ ಚಂಡೂರು ಮೂರ್ತಿ ನೇತೃತ್ವದಲ್ಲಿ ಬೆಳಗ್ಗೆ ಸ್ವಲ್ಪ ಸಮಯ ಪ್ರತಿಭಟನೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದಿನಕ್ಕೊಂದು ಪ್ರತಿಭಟನೆ ನಡೆಯಲಿದ್ದು, ಏಪ್ರಿಲ್ 1ರಂದು ನೌಕರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರು ಮತ್ತು ಸರ್ಕಾರದ ಗಮನ ಸೆಳೆಯಲಿದ್ದಾರೆ. ಏ.2ರಂದು ಸಾರ್ವಜನಿಕ ಪ್ರದೇಶಗಳಲ್ಲಿ ಕಾಫಿ, ಟೀ, ಬಜ್ಜಿ, ಬೋಂಡ ತಯಾರಿಸಿ ಮಾರಾಟ ಮಾಡಲಿದ್ದಾರೆ. 3ರಂದು ನೌಕರರು ಮತ್ತು ಕುಟುಂಬ ಸದಸ್ಯರು ಎಲ್ಲಾ ನಗರಗಳ ಮುಖ್ಯ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಭಿತ್ತಿ ಪತ್ರ ಪ್ರದರ್ಶನ ಮಾಡುವರು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ತಿಳಿಸಿದೆ. ಈ ಸಂದರ್ಭದಲ್ಲಿ ಸಾರಿಗೆ ನೌಕರರಾದ ನಲ್ಲಪ್ಪರೆಡ್ಡಿಪಲ್ಲಿ ಮಂಜು, ಮಹೇಶ್, ತುಳುಸಿ, ನಯಾಜ್, ಕಲೀಮುಲ್ಲಾ, ರಮೇಶ್, ನರಸಿಂಹ ಮೂರ್ತಿ, ನಾರಾಯಣಪ್ಪ, ಅನಿಲ್ , ವೆಂಕಟರೆಡ್ಡಿ, ರಘು ಹೈದರವಲ್ಲಿ, ಶ್ರೀನಿವಾಸ್, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.