Wednesday, January 22, 2025
ಸುಳ್ಯ

ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್‍ಗೆ ನುಗ್ಗಿದ ಕಳ್ಳರು ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಸಿಸಿ ಕ್ಯಾಮರಾ ಕಳವು-ಕಹಳೆ ನ್ಯೂಸ್

ಸುಳ್ಯ : ಬುಧವಾರ ರಾತ್ರಿ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಂಗಡಿ ಮಾಲಕರು ಮತ್ತು ಪೋಲೀಸರು ಅಂಗಡಿ ಬಾಗಿಲು ತೆರೆದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಸುಮಾರು 50 ಸಾವಿರ ನಗದು ಹಾಗೂ 10 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಅಂಗಡಿಯೊಳಗಿದ್ದ ಸಿ.ಸಿ.ಕ್ಯಾಮರ, ಡಿ.ವಿ.ಆರ್. ಬಾಕ್ಸ್ ಸಮೇತ ಕಳ್ಳರು ಹೊತ್ತೊಯ್ದಿದ್ದಾರೆಂದು ತಿಳಿದುಬಂದಿದೆ.