Tuesday, January 21, 2025
ಪುತ್ತೂರು

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಮಾಹಿತಿ ಘಟಕದ ಆಶ್ರಯದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ಮಾರ್ಚ 31 ರಂದು ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಉಪನ್ಯಾಸಕಿ ಡಾ.ರೇಖಾ ಕೆ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಕುಮಾರ್ ಎಸ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಡಾ. ರೇಖಾ ಕೆ, ಇವರು ಕಾನೂನಿನ ಕಲಿಯುವಿಕೆ ಎಂಬುದು ಒಂದು ಸಾಗರವನ್ನು ಅರಿಯುವಂತೆ. ಕಾನೂನು ಕಲಿಯುತ್ತಾ ಹೋದಂತೆ ಕಾನೂನಿನ ಕುರಿತಾಗಿ ಜ್ಞಾನ ಹೆಚ್ಚುವುದರೊಂದಿಗೆ, ತನ್ನನ್ನು ತಾನು ಸಮಾಜಮುಖಿಯಾಗಿಸುವಲ್ಲಿ ಮತ್ತು ತನ್ನನ್ನು ತಾನು ರಕ್ಷಸಿಕೊಳ್ಳುವ ಕುರಿತಾಗಿ ಮಾಹಿತಿಯು ದೊರೆಯುತ್ತದೆ ಎಂದು ತಿಳಿಸಿದರು.

ಉಪನ್ಯಾಸಕರಾದ ಶ್ರೀ ಕುಮಾರ್ ಎಸ್ ಇವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಜ್ಞಾನ ಪಡೆದುಕೊಳ್ಳಲು ಇರುವ ಹಲವಾರು ಅವಕಾಶಗಳ ಕುರಿತಾಗಿ ಮಾಹಿತಿ ನೀಡಿದರು. ಜೊತೆಗೆ ಪದವಿಪೂರ್ವ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಾಗ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.

ಇದಕ್ಕೆ ಪೂರಕವಾಗಿ ‘ನ್ಯಾಯಧಾರಾ’ ಎಂಬ ಶೀರ್ಷಿಕೆಯಡಿ ವಿದ್ಯಾರ್ಥಿಗಳಿಗೆ ಕಾನೂನಿನ ವಿವಿಧ ಸ್ತರಗಳಲ್ಲಿ ಒಂದಾದ ನ್ಯಾಯಾಂಗ ವ್ಯವಸ್ಥೆ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದಾಗಿ, ಈ ಮೂಲಕ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣದ ನಂತರ ಕಾನೂನು ಶಿಕ್ಷಣಕ್ಕೂ ಆಧ್ಯತೆ ನೀಡಬಹುದು ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸಾದ್ ಶಾನ್‍ಭೋಗ್ ಉಪಸ್ಥಿತರಿದ್ದರು.