Monday, January 20, 2025
ಬೆಂಗಳೂರು

ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ಸಾಧ್ಯತೆ-ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು ಕೊರೋನ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಮತ್ತು ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಕಾರಣ ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ನೀಡಲು ಚಿಂತನೆ ನಡೆಸುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಪ್ರಿಲ್ ಅಂತ್ಯದೊಳಗೆ 9ನೇ ಪಠ್ಯಕ್ರಮ ಪೂರ್ಣಗೊಳಿಸಿ ಮೇ ತಿಂಗಳಲ್ಲಿ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ಅವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೇಸಗೆ ರಜೆ ಇರುವುದಿಲ್ಲ. ಬದಲಾಗಿ ಪಠ್ಯಕ್ರಮ ಪೂರ್ಣಗೊಳ್ಳುತ್ತಿದ್ದಂತೆ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಲು ರಜೆ ನೀಡಲಾಗುತ್ತದೆ. ಇನ್ನು ಎಪ್ರಿಲ್ ಅಂತ್ಯ ಮತ್ತು ಮೇ ತಿಂಗಳಲ್ಲಿ ಮಕ್ಕಳಿಗೆ ತರಗತಿ ನಡೆಸುವುದು ಕಷ್ಟ. ಹೀಗಾಗಿ ಮೇ ತಿಂಗಳಲ್ಲಿ ರಜೆ ಘೋಷಿಸುವ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ. ಕೊರೋನದಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ತಡವಾಗಿ ಪ್ರಾರಂಭವಾಗಿರುವುದರಿಂದ ಬೇಸಗೆ ರಜೆ ಕಡಿತ ಮಾಡುವ ಬಗ್ಗೆ ಈ ಹಿಂದೆಯೇ ಇಲಾಖೆ ನಿರ್ಧರಿಸಿದ್ದು, ಆದರೆ, ಬಿಸಿಲಿನ ಬೇಗೆ ಜತೆಗೆ ಕೋವಿಡ್ ಎರಡನೇ ಅಲೆಯ ಆಂತಕವೂ ಹೆಚ್ಚುತ್ತಿರುವುದರಿಂದ ಮೇ ತಿಂಗಳಲ್ಲಿ ರಜೆ ಘೋಷಿಸುವ ಬಗ್ಗೆ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು