Monday, January 20, 2025
ಬೆಂಗಳೂರು

ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ ಎಮ್ –ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು.

ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಅವರು ಭಡ್ತಿ ಹೊಂದಿ ಪ್ರಸ್ತುತ ಬೆಂಗಳೂರಿನ ಕೆ.ಎಲ್.ಎನಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರು ಬಾಡದ ನಿವೃತ್ತ ಮುಖ್ಯೋಪಧ್ಯಾಯರಾದ ದಿ. ನಾರಾಯಣ ಶೇರುಗಾರ್ ಹಾಗೂ ದಿ. ಜಯಲಕ್ಷ್ಮೀ ಅವರ ಪುತ್ರರಾದ ರಾಘವೇಂದ್ರ ಅವರು ಪ್ರಸ್ತುತ ಮಡದಿ ಶ್ರೀನೇತ್ರಾ ಹಾಗೂ ಇಬ್ಬರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ.