Monday, January 20, 2025
ಹೆಚ್ಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟಗಾರ ತ್ಯಾಗ ಅರಿವು ಅಗತ್ಯ; ತಹಶಿಲ್ದಾರ್ ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ ಅಂದರೆ 2022ಕ್ಕೆ 75 ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಅಂಗವಾಗಿ ಬಾಗೇಪಲ್ಲಿ ಕಸಬಾ ಹೋಬಳಿ ಘಂಟಂವಾರಿಪಲ್ಲಿ ಗ್ರಾಮ ಪಂಚಾಯತಿ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು.

ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರನ್ನು ಸ್ಮರಿಸಬೇಕು’ ಎಂದು ಬಾಗೇಪಲ್ಲಿ ತಾಲೂಕು ತಹಶಿಲ್ದಾರ್ ಡಿ.ಎ.ದಿವಾಕರ್ ಹೇಳಿದರು.

‘ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವವು ಯುವ ಜನರಿಗೆ ದೇಶದ ಇತಿಹಾಸ ನೆನಪಿಸುವ ಕಾರ್ಯವಾಗಿದೆ.

ಇದರ ಜೊತೆಗೆ ಸ್ವಚ್ಛತೆ ಸಾಮಾಜಿಕ ಸೇವೆಯಲ್ಲಿ ಯುವಕರು ತೊಡಗಿಸಿ ದೇಶ ಸೇವೆಗೆ ಮುಂದಾಗಬೇಕು. ಸ್ವಚ್ಚತೆ ನಮ್ಮ ಮನೆಯಿಂದಲೇ ಪ್ರಾರಂಭಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಇಓ ಮಂಜುನಾಥ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಿ.ರಾಮಸುಬ್ಬಮ್ಮ , ದೈಹಿಕ ಶಿಕ್ಷಣ ಶಿಕ್ಷಕ ಸಿ.ನಾರಾಯಣ ಸ್ವಾಮಿ ಗ್ರಾಮ ಪಂಚಾಯತಿ ಪಿ.ಡಿ.ಓ ನಾರಾಯಣ ಸ್ವಾಮಿ, ಕಾರ್ಯದರ್ಶಿ ಧನೌಜ್ ನಾಯಕ್, ಅದ್ಯಕ್ಷೆ ನಾಗಮಣಿ, ಉಪಾಧ್ಯಕ್ಷ ನವೀನ್, ಸದಸ್ಯರಾದ ಎನ್.ಉಮಾದೇವಿ, ಸುಧಾ, ನಾಗರತ್ನಮ್ಮ, ವೆಂಕಟರೆಡ್ಡಿ, ಶ್ರೀನಿವಾಸ್, ಗಂಗಾಧರ, ಕಮಲಮ್ಮ, ಲಕ್ಷ್ಮೀ, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.