ಕಸಬಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಮಹಿಳೆಯರಿಂದ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ-ಕಹಳೆ ನ್ಯೂಸ್
ಬಾಗೇಪಲ್ಲಿ : ಕಸಬಾ ತಾಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವ 37 ಕುಟುಂಬಗಳು ವಾಸವಾಗಿರುವ ಸರ್ಕಾರಿ ತರಕಾರಿ ಮಾರ್ಕೆಟ್ ಹಿಂಬಾಗ ಬಂಗ್ಲಾಕುಂಟೆ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗ್ರಾ.ಪಂ ಮುಂಭಾಗ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಕಸಬಾ ತಾಲೂಕು ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬಂಗ್ಲಾಕುಂಟೆ ಬಡಾವಣೆಯ ಮಹಿಳೆಯರು ಗುರುವಾರ ಬೆಳಗ್ಗೆ ಗ್ರಾಮ ಪಂಚಾಯಿತಿ ಮುಂಭಾಗ ಮಹಿಳೆಯರು ಜಮಾಯಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಮೂರು ತಿಂಗಳಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉದ್ಬವಾಗಿದೆ. ಇಷ್ಟದಾರು ಗ್ರಾಮ ಪಂಚಾಯತಿಯ ಅಧಿಕಾರಿಗಳು, ಅದ್ಯಕ್ಷರು , ಉಪಾಧ್ಯಕ್ಷರು ಹಾಗೂ ಪಂಚಾಯತಿ ಪಿಡಿಓ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಮಹಿಳೆಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ಅಮೃತ ಮಹೋತ್ಸವ ಕಾರ್ಯಕ್ರಮ ಪಾಲ್ಗೊಳ್ಳಲು ಬಂದಿದ್ದಾಗ ಕಾರ್ಯಕ್ರಮ ಮದ್ಯದಲ್ಲಿ ಒಂದು ಬಾಗೇಪಲ್ಲಿ ತಾಲೂಕು ತಹಶಿಲ್ದಾರ್ ಡಿ.ಎ.ದಿವಾಕರ್ ಮದ್ಯ ಪ್ರವೇಶಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತೇವೆ ಎಂಬ ಆಶ್ವಾಸನೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ಹಿಂಪಡೆದರು.
ಈ ಪ್ರತಿಭಟನೆಯಲ್ಲಿ ಶಾಂತಿ, ಲಕ್ಷ್ಮೀನರಸಮ್ಮ ಗಂಗರತ್ನಮ್ಮ, ಅನಸೂಯಾಮ್ಮ , ಮಂಜುಳಾ, ನಾಗಮಣಿ, ಲಕ್ಷ್ಮೀ ನರಸಮ್ಮ, ವಹೀದಾ ಆದಿನಾರಾಯಣಮ್ಮ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.