Tuesday, January 21, 2025
ಸುದ್ದಿ

ಮಂಗಳೂರು ನಗರದ ಕುಲಶೇಖರ ಕಟ್ಟೆಯ ಬಳಿ ನಡೆದ ದರೋಡೆ ಪ್ರಕರಣ ; ಮತ್ತೆ ಐವರ ಬಂಧನ-ಕಹಳೆ ನ್ಯೂಸ್

ಮಂಗಳೂರು : ಮಾರ್ಚ್ 17ರಂದು ನಗರದ ಕುಲಶೇಖರ ಕಟ್ಟೆಯ ಬಳಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಇನ್ನೂ ಐದು ಮಂದಿಯನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತರನ್ನು 26 ವರ್ಷದ ಆಕಾಶ್‍ಭವನ ಶರಣ್‍ನ ಸಹೋದರ ಧೀರಜ್ ಯಾನೆ ಕುಟ್ಟ ಆಕಾಶಭವನ, 31ವರ್ಷದ ಮಧ್ಯಪ್ರದೇಶದ ರಾಜೇಶ್ ಥೋಮರ್ ಯಾನೆ ರಾಜ್ಬೀರ್, 25 ವರ್ಷದ ಬಜಪೆ ಆದ್ಯಪಾಡಿಯ ರಾಕೇಶ್ ಕಂಬಳಿ ಯಾನೆ ರಾಕಿ , 38 ವರ್ಷದ ಎಕ್ಕಾರಿನ ರಾಜೇಶ್ ಆಚಾರ್ಯ, 23 ವರ್ಷದ ಆಕಾಶಭವನದ ಸಾಗರ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಕುಲಶೇಖರ ಕಟ್ಟೆಯ ಬಳಿ ನಡೆದ ದರೋಡೆ ಕೇಸ್‍ನಲ್ಲಿ ದೀಕ್ಷಿತ್ ಯಾನೆ, ದೀಕ್ಷು ಕುಂಡಕೋರಿ ಯಾನೆ, ದೀಕ್ಷಿತ್ ಪೂಜಾರಿ, ಚಂದ್ರ ಯಾನೆ ಚಂದ್ರಹಾಸ ಪೂಜಾರಿ, ಪ್ರಜ್ವಲ್ ಯಾನೆ ಹೇಮಚಂದ್ರ, ಸಂತೋಷ್ ಪೂಜಾರಿ ಯಾನೆ ನಾಯಿ ಸಂತು ಸಿಕ್ಕಿಬಿದ್ದು ಜೈಲು ಪಾಲಾಗಿದ್ದಾರೆ. ಇವರನ್ನು ವಿಚಾರಣೆಗೆ ಒಳಪಡಿಸಿದಾಗ ಮತ್ತೆ ಐದು ಮಂದಿಯ ಹೆಸರು ಹೊರಬಿದ್ದಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಂಕನಾಡಿ ನಗರ ಠಾಣೆಯ ಪೊಲೀಸರು ಗುರುವಾರ ಆರೋಪಿಗಳನ್ನು ಬಂಧಿಸಿದ್ದಾರೆ. “ಆರೋಪಿಗಳು ಆಕಾಶಭವನದ ಶರಣ್ ಯಾನೆ ರೋಹಿದಾಸ್‍ನ ಸಹಚರರಾಗಿದ್ದು, ಜೈಲಿನಲ್ಲಿದ್ದುಕೊಂಡೇ ಶರಣ್ ತನ್ನದೇ ಆದ ಗ್ಯಾಂಗ್ ಕಟ್ಟಿದ್ದ. ಶ್ರೀಮಂತರನ್ನು ಬೆದರಿಸಿ ಹಫ್ತಾ ವಸೂಲಿ ಮಾಡುವುದು, ಹಣಕಾಸಿನ ಡೀಲ್ ಮಾಡುವುದು, ಮಾದಕ ವಸ್ತುಗಳನ್ನು ಸಾಗಿಸುವುದು, ಮರಳು ದಂಧೆಯಲ್ಲಿ ತೊಡಗಿಸಿಕೊಳ್ಳುವುದು ಮುಂತಾದ ಅಕ್ರಮ ಚಟುವಟಿಕೆಗಳ ಮೂಲಕ ಹಣ ಗಳಿಸುವ ಉದ್ದೇಶವನ್ನು ಹೊಂದಿದ್ದ. ನಗರದಲ್ಲಿರುವ ಎಲ್ಲಾ ಗ್ಯಾಂಗ್‍ಗಳು ತನ್ನ ಕೈಕೆಳಗೆ ಇರಬೇಕು ಎಂದು ಆತ ಬಯಸಿದ್ದ. ಹಾಗಾಗಿ ತನ್ನ ಎದುರಾಳಿ ಗ್ಯಾಂಗ್ ಅನ್ನು ಮಟ್ಟಹಾಕಲು ತೀರ್ಮಾನ ಮಾಡಿದ್ದ. ನಗರದಲ್ಲಿನ ಇನ್ನೊಂದು ಕ್ರಿಮಿನಲ್ ಗ್ಯಾಂಗ್‍ನಲ್ಲಿ ಸಕ್ರಿಯರಾಗಿರುವ ಪ್ರದೀಪ್ ಮೆಂಡನ್, ಮಂಕಿ ಸ್ಟ್ಯಾಂಡ್ ವಿಜಯಾ, ಗೌರೀಶ್ ಯಾನೆ ಗೌರಿ ಅವರ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೂ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಈ ಗ್ಯಾಂಗ್‍ಗೆ ರಾಜೇಶ್ ಥೋಮರ್ ಮಾರಕಾಸ್ತ್ರ ಪೂರೈಕೆ ಮಾಡಿದ್ದು, ಈತನು 2016ರಲ್ಲಿ ಕಟೀಲಿನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿಯೂ ಆಗಿದ್ದಾನೆ. ರಾಕೇಶ್ ಕಂಬಳಿಯ ಮೇಲೆ ಮಣಿಪಾಲ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಹಲ್ಲೆ ಹಾಗೂ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಆಚಾರ್ಯನ ಮೇಲೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.