ಅಸ್ಸಾಂನಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆ ; ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಆಯೋಗ-ಕಹಳೆ ನ್ಯೂಸ್
ನವದೆಹಲಿ : ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳು, ಅಸ್ಸಾಂನಲ್ಲಿ ಗುರುವಾರ ಎರಡನೇ ಹಂತದ ಮತದಾನ ಮುಕ್ತಾಯವಾದ ಕೆಲವೇ ಗಂಟೆಗಳಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಈ ಘಟನೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಆಯೋಗವು ಅಮಾನತುಗೊಳಿಸಿದೆ. ಈ ಕುರಿತು ಅಸ್ಸಾಂ ಮೂಲದ ಪತ್ರಕರ್ತ ಅತಾನು ಭುಯಾನ್ ಇವಿಎಂಗಳಿರುವ ಕಾರಿನ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಈ ಘಟನೆಯ ಬಳಿಕ ಪಥರ್‍ಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ. ಇವಿಎಂಗಳಿದ್ದ ಬೊಲೆರೊ ಕಾರು ಬಿಜೆಪಿ ಅಭ್ಯರ್ಥಿ ಕೃಷ್ಟೆಂದು ಪೌಲ್ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದೆ. ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಈ ಘಟನೆಗೆ ಸಂಬಂಧಿಸಿದಂತೆ ಇಂಥ ದೂರುಗಳ ಬಗ್ಗೆ ಚುನಾವಣಾ ಆಯೋಗ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.