ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸೆಕ್ಸ್ ಸಿಡಿ ಹಗರಣ ಸಂಬಂಧ ವಿಚಾರಣೆಗೆ ಇಂದು ಹಾಜರಾಗುವಂತೆ ಸೂಚಿಸಲಾಗಿದ್ದರೂ, ಹಾಜರಾಗಿಲ್ಲ.
ಅವರು ತಮ್ಮ ವಕೀಲರ ಮೂಲಕ ತಾವು ವಿಚಾರಣೆಗೆ ಬರುತ್ತಿಲ್ಲ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡಕ್ಕೆ ತಿಳಿಸಿದರು. ಮತ್ತು ಸಂತ್ರಸ್ತೆ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ಹೇಳಲಾಗಿರುವ ಕಾರಣ ರಮೇಶ್ ಜಾರಕಿಹೊಳಿ ಇಂದು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎಂಬ ಟೀಕೆಗಳು ಕೇಳಿ ಬಂದಿದ್ದು, ಇದನ್ನು ನಿರಾಕರಿಸಿರುವ ರಮೇಶ್ ಜಾರಕಿಹೊಳಿ ಅವರು ಅಸೌಖ್ಯದಿಂದ ವಿಚಾರಣೆಗೆ ಇಂದು ಹಾಜರಾಗಿಲ್ಲ ಎಂದು ಸ್ವಷ್ಟಪಡಿಸಿದ್ದಾರೆ.