Thursday, April 17, 2025
ಹೆಚ್ಚಿನ ಸುದ್ದಿ

ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬೇಕರಿ ಮತ್ತು ಪೈಪ್ ಅಂಗಡಿಗಳು-ಕಹಳೆ ನ್ಯೂಸ್

ವಿಜಯಪುರ : ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬೆಳ್ಳಂ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ, ಎರಡು ಅಂಗಡಿಗಳು ಬೆಂಕಿಗೆ ಸುಟ್ಟು ಹೋಗಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿನ ಬೇಕರಿ ಮತ್ತು ಪೈಪ್ ಅಂಗಡಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ಸಿಬ್ಬಂದಿ, ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾಗಿದ್ದು, ಈ ಘಟನೆ ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ