Saturday, April 5, 2025
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಲ್ಯಾಂಡಿಂಗ್ ಆಗಲು ಆಗದೆ ಮಂಗಳೂರಿಗೆ-ಕಹಳೆ ನ್ಯೂಸ್

ಹುಬ್ಬಳ್ಳಿ : ಮಂಜು ಕವಿದ ವಾತಾವರಣವಿದ್ದ ಕಾರಣ ಬೆಳಗ್ಗೆ 7:20 ಗಂಟೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಇಂಡಿಗೋ ವಿಮಾನ, ಲ್ಯಾಂಡಿಂಗ್ ಆಗಲು ಆಗದೆ ಆಕಾಶದಲ್ಲಿ ಸುಮಾರು 20 ನಿಮಿಷ ಸುತ್ತಾಡಿದ್ದು, ಹಾಗೂ ಎಟಿಎಸ್‍ನಿಂದ ಸಿಗ್ನಲ್ ಸಿಗದ ಕಾರಣ ಕೊನೆಗೆ ಮಾರ್ಗ ಬದಲಿಸಿಕೊಂಡು ಮಂಗಳೂರಿಗೆ ಪ್ರಯಾಣ ಬೆಳೆಸಿದೆ ಎಂದು ಹೇಳಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಮಾನದಲ್ಲಿ ಸುಮಾರು 65 ಪ್ರಯಾಣಿಕರು ಇದ್ದು, ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅಂದಾಜು 62 ಪ್ರಯಾಣಿಕರು ತೆರಳುವವರಿದ್ದರು ಎಂದು ತಿಳಿದುಬಂದಿದೆ. ಇನ್ನು ಇದೇ ಸಮಯದಲ್ಲಿ ಚೆನ್ನೈನಿಂದ ಹುಬ್ಬಳ್ಳಿಗೆ ಬೆಳಗ್ಗೆ 8:00 ಗಂಟೆಗೆ ಆಗಮಿಸಿದ್ದ ಇಂಡಿಗೋ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿ, ಮರಳಿ ಕೊಚ್ಚಿಗೆ ಪ್ರಯಾಣ ಬೆಳೆಸಿತು ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ