ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಗೆ ಕೆ.ಆರ್.ಪಿ.ಎಸ್ ಜಿಲ್ಲಾ ಮುಖಂಡ ಮಂಜುನಾಥ ರೆಡ್ಡಿ ಖಂಡನೆ-ಕಹಳೆ ನ್ಯೂಸ್
ಬಾಗೇಪಲ್ಲಿ : ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಘಟನೆಯನ್ನ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ಜಿಲ್ಲಾ ಮುಖಂಡ ಪಿ.ಮಂಜುನಾಥ ರೆಡ್ಡಿ ಖಂಡಿಸಿದ್ದಾರೆ.
ಅವರು ಪಟ್ಟಣದ ಬಾಗೇಪಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜಸ್ಥಾನದ ಅಲ್ವರ್ ಜಿಲ್ಲೆಗೆ ಕಿಸಾನ್ ಮಹಾ ಪಂಚಾಯತ್ ನಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ನಡೆಸಲು ಯತ್ನಿಸಿದ್ದು, ಈ ಮೂಲಕ ಗೂಂಡಾ ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದರು. ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಜಾಪ್ರಭುತ್ವ ದಮನಕಾರಿ ನೀತಿ ಅನುಸರಿಸುತ್ತಿರುವುದು ರಾಷ್ಟ್ರೀಯ ಪಕ್ಷದ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಈ ರೀತಿಯ ಗೂಂಡಾ ವರ್ತನೆಗೆ ದೇಶದ ರೈತರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ರೈತ ಮುಖಂಡ ಮಂಜುನಾಥ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸಮಿತಿ ಅಧ್ಯಕ್ಷ ಇ.ಸಿ.ಬಯ್ಯಾರೆಡ್ಡಿ ಮಾತನಾಡಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ನಾಲ್ಕು ತಿಂಗಳಿನಿಂದ ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವವನ್ನು ಟಿಕಾಯತ್ ವಹಿಸಿದ್ದಾರೆ. ರಾಜಧಾನಿ ಸುತ್ತಲಿನ ಗಡಿ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರೂ, ರಾಕೇಶ್ ಟಿಕಾಯತ್ ಮತ್ತು ಅವರ ಬೆಂಬಲಿಗರು ವಿವಿಧ ರಾಜ್ಯಗಳಿಗೆ ಪ್ರವಾಸ ಕೈಗೊಂಡು ರೈತರನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದಾರೆ.ಇಂತಹ ಅವರು ವಿರುದ್ಧ ದಾಳಿ ಮಾಡಿರುವುದು ಖಂಡನಿಯ ಎಂದು ಹೇಳಿದರು. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ‘ಮಹಾಪಂಚಾಯತ್’ ಸಭೆ ನಡೆಸಿರುವ ಅವರು, ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟ ತೀವ್ರಗೊಳಿಸಲು ರೈತರು ಒಂದುಗೂಡುವಂತೆ ಕರೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆ ಆರ್ ಪಿ ಎಸ್ ಜಿಲ್ಲಾ ಅದ್ಯಕ್ಷ ಡಿಎಸ್.ಮುನಿಕೃಷ್ಣಪ್ಪ ತಾಲೂಕು ಪಂಚಾಯತಿ ಸದಸ್ಯ ಶ್ರೀರಾಮ ನಾಯಕ್ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.