Wednesday, January 22, 2025
ಹೆಚ್ಚಿನ ಸುದ್ದಿ

ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ-ಕಹಳೆ ನ್ಯೂಸ್

ಉಳ್ಳಾಲ : ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯನ್ನು ರವಿವಾರ ಆಡಳಿತ ಸಮಿತಿ ತೆರೆಯುವ ಸಂದರ್ಭದಲ್ಲಿ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲವು ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಇದೀಗ ಮತ್ತೆ ಕಾರಣಿಕ ಕ್ಷೇತ್ರವಾದ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ಈ ದುಷ್ಕøತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯ ಕುರಿತು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು