ಬೆಂಗಳೂರು : ಇಂದು ಎಸ್‍ಐಟಿ ವಿಚಾರಣೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹಾಜರಾಗಬೇಕಿದ್ದು, ಆದರೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸಚಿವ ಭೈರತಿ ಬಸವರಾಜ್ ಮಾಹಿತಿ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿಯೇ ಇದ್ದಾರೆ. ನಾನು ನಿನ್ನೆಯಷ್ಟೇ ಅವರ ಜೊತೆ ಮಾತನಾಡಿದೆ ಎಂದು ಹೇಳಿದರು. ಹಾಗೂ ಕೊರೋನಾ ನೆಗೆಟಿವ್ ಬಂದ ನಂತರ ಬೆಳಗಾವಿಗೆ ಪ್ರಚಾರಕ್ಕೆ ಬರುತ್ತಾರೆ ಎಂದಿದ್ದಾರೆ. ಏಪ್ರಿಲ್ 1ರಂದು ಆಸ್ಪತ್ರೆಗೆ ಬಂದಿದ್ದ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಗೋಕಾಕ್ ಆಸ್ಪತ್ರೆಯ ಟಿಹೆಚ್ ಒ ಡಾ. ಮುತ್ತಣ್ಣ ಕೋಪದ್ ಹೇಳಿದ್ದಾರೆ. ಇವರಿಗೆ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದಾರೆ.