Tuesday, January 21, 2025
ಪುತ್ತೂರು

ವಿವೇಕಾನಂದ ಕ್ಯಾಂಪಸ್‍ಗೆ ಏ.8ಕ್ಕೆ ಸಿ.ಎಂ. ಭೇಟಿ; ವಿವೇಕಾನಂದ CBSE ಸಂಸ್ಥೆಯ ನೂತನ ಕಟ್ಟಡ ಲೋಕಾರ್ಪಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSE) ನೂತನ ಕಟ್ಟಡವನ್ನು ಇಲ್ಲಿನ ನೆಹರೂ ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್‍ನಲ್ಲಿ ನಿರ್ಮಿಸಲಾಗಿದ್ದು, ವಿದ್ಯುಕ್ತವಾಗಿ ಲೋಕಾರ್ಪಣಾ ಕಾರ್ಯಕ್ರಮವು ಏ.8ರಂದು ಸಂಜೆ 5.30ಕ್ಕೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಟ್ಟಡವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ವಹಿಸಲಿರುವರು. ಮುಖ್ಯ ಅಭ್ಯಾಗತರಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳೀನ್ ಕುಮಾರ್ ಕಟೀಲ್, ಕರ್ನಾಟಕ ಸರಕಾರದ ಮುಜರಾಯಿ ಮತ್ತು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂಧರ್ ಜೈನ್, ಮಂಗಳೂರು ಕೆನರಾ ಬ್ಯಾಂಕ್‍ನ ರೀಜನಲ್ ಮ್ಯಾನೇಜರ್ ಯೋಗೀಶ್ ಆಚಾರ್ಯ ಉಪಸ್ಥಿತರಿರುವರು.