Wednesday, January 22, 2025
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ಶಿರಾಡಿ ಗ್ರಾಮದಲ್ಲಿ ಟ್ರಕ್ ಮತ್ತು ಟಾಟಾಏಸ್ ಮುಖಾಮುಖಿ ಡಿಕ್ಕಿ ; ಓರ್ವ ಸಾವು-ಕಹಳೆ ನ್ಯೂಸ್

ಉಪ್ಪಿನಂಗಡಿ : ಏ.5ರಂದು ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಹಾಗೂ ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ 56 ವರ್ಷದ ಹನೀಫ್ ಎಂದು ಗುರುತಿಸಲಾಗಿದೆ. ಹಾಗೂ ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಟಾಟಾಏಸ್ ನಲ್ಲಿದ್ದ ರಫೀಕ್ ಮತ್ತು ಕರೀಮ್ ಎಂಬುವವರಿಗೆ ಗಾಯಗಳಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು