Wednesday, January 22, 2025
ಪುತ್ತೂರು

ಎಪ್ರಿಲ್ 8 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಸರಣಿ ಕಾರ್ಯಕ್ರಮದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ವತಿಯಿಂದ, ವಸಂತ-ವಿಂಶತಿ ಸರಣಿ ಕಾರ್ಯಕ್ರಮದ ಉದ್ಘಾಟನೆ ಎಪ್ರಿಲ್ 8 ರಂದು, ಸಂಜೆ 6.30ಕ್ಕೆ ಪುತ್ತೂರು ನೆಹರು ನಗರ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

2001ರಲ್ಲಿ ಪ್ರಾರಂಭಗೊಂಡ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು, 20 ವರ್ಷಗಳನ್ನು ಪೂರೈಸಿದ ಅಂಗವಾಗಿ, ಕಾಲೇಜಿನಲ್ಲಿ ವರ್ಷಪೂರ್ತಿ ಸಮಾಜಮುಖಿ ಸರಣಿ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಾಭಾಕರ್ ಭಟ್ ವಹಿಸಲಿದ್ದಾರೆ.