Sunday, November 24, 2024
ಬೆಂಗಳೂರು

ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಏಪ್ರಿಲ್ 10ರವರೆಗೆ ಮಳೆ ನಿರೀಕ್ಷೆ ; ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು : ಏರುತ್ತಿರುವ ಬಿಸಿಲಿನ ಬೇಗೆಯ ನಡುವೆಯೂ ಇಂದಿನಿಂದ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಏಪ್ರಿಲ್ 6ರಂದು ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಮತ್ತು ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಹಾಗೂ ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ ಏಪ್ರಿಲ್ 9 ಮತ್ತು 10ರಂದು ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಏಪ್ರಿಲ್ 7 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು