Tuesday, January 21, 2025
ಸುದ್ದಿ

ಏಪ್ರಿಲ್ 10ರಂದು ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವವು ಏಪ್ರಿಲ್ 10 (ಶನಿವಾರ), 2021 ರಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಾನ್ಯ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರೆ, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಘಟಿಕೋತ್ಸವ ಭಾಷಣ ನೆರವೇರಿಸಲಿದ್ದಾರೆ.

ಈ ಕಾರ್ಯಕ್ರಮದ ಸಂಬಂಧ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ಏಪ್ರಿಲ್ 8 (ಗುರುವಾರ), ಮಧ್ಯಾಹ್ನ 3 ಗಂಟೆಗೆ, ಹಂಪನಕಟ್ಟೆಯ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸುದ್ದಿಗೋಷ್ಠಿಗೆ ತಾವೆಲ್ಲರೂ ಆಗಮಿಸಿ, ವಿಶ್ವವಿದ್ಯಾನಿಲಯದ ಈ ಮಹತ್ವದ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಚಾರ ಸಿಗುವಂತಾಗಬೇಕೆಂದು ಕುಲಸಚಿವ (ಪ್ರಭಾರಿ) ಪ್ರೊ. ಪಿ ಎಲ್ ಧರ್ಮ ಅವರು ಮನವಿ ಮಾಡಿಕೊಂಡಿದ್ದಾರೆ.