Wednesday, January 22, 2025
ಹೆಚ್ಚಿನ ಸುದ್ದಿ

ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ವೀರಕಂಬ ಗ್ರಾಮ ಇದರ ಏಪ್ರಿಲ್ ತಿಂಗಳ ಮಾಸಿಕ ಸಭೆ-ಕಹಳೆ ನ್ಯೂಸ್

ಕಲ್ಲಡ್ಕ : ಏಪ್ರಿಲ್ 6ರಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ವೀರಕಂಬ ಗ್ರಾಮ ಇದರ ಏಪ್ರಿಲ್ ತಿಂಗಳ ಮಾಸಿಕ ಸಭೆಯು ವೀರಕಂಭ ಗ್ರಾಮ ಪಂಚಾಯತಿನ ರಾಜೀವ್ ಗಾಂಧಿ ಸಮುದಾಯ ಭವನದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಸುನಿಲ್ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮ ಗ್ರಾಮಮಟ್ಟದಲ್ಲಿ ನಡೆಯುತ್ತಿರುವುದರಿಂದ ವ್ಯವಸ್ಥಾ ದೃಷ್ಟಿಯಿಂದ ವೀರಕಂಭ ಗ್ರಾಮದ ಮಜಿ ಶಾಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಗ್ರಾಮದ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸುವ ಬಗ್ಗೆ ನಿರ್ಣಯಿಸಲಾಯಿತು. ವೇದಿಕೆಯಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ದಿನೇಶ್ ಪೂಜಾರಿ , ಉಪಾಧ್ಯಕ್ಷ ಶ್ರೀಮತಿ ಶೀಲಾ ವೇಗಸ್, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಜ್ಯೋತಿ ಕೆ ಎನ್ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಶ್ರೀಮತಿ ಕೋಮಲಾಕ್ಷಿ ಸ್ವಾಗತಿಸಿ ಆಶಾ ಕಾರ್ಯಕರ್ತೆ ಶ್ರೀಮತಿ ಲೀಲಾವತಿ ವಂದಿಸಿದರು. ಸಮಿತಿಯ ಕಾರ್ಯದರ್ಶಿ ಶ್ರೀಮತಿ ಸ್ನೇಹಲತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.